ಆಂಧ್ರ ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯ : ಅತ್ಯಾಚಾರ ಅಪರಾಧಿಗೆ 21 ದಿನದಲ್ಲಿ ಶಿಕ್ಷೆ ವಿಧಿಸುವ ದಿಶಾ ಕಾನೂನಿಗೆ ಒಪ್ಪಿಗೆ

ಡಿ. 13: ಬಾಲಕಿಯರು ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ಆಗಾಗ ವರದಿಯಾಗುತ್ತಿದ್ದು, ದೇಶಕ್ಕೆ ದೇಶವೇ ಆತಂಕ ಪಡುವಂತ ಸ್ಥಿತಿಯಲ್ಲಿದೆ. ಮುನ್ನೆಯ ದಿಶಾ ಪ್ರಕರಣದ ಆರೋಪಿಗಳು ಪೊಲೀಸ್ ಎನ್ಕೌಂಟರ್ನಲ್ಲಿ ಬಲಿಯಾಗಿದ್ದಕ್ಕೆ ಎಲ್ಲೆಡೆ ಸಂಭ್ರಮಾಚರಣೆ ನಡೆದು ಇಂತಹ ನೀಚರು ಬದುಕಿರಬಾರದು ಎಂಬ ಮನಸ್ಸುಗಳಿಗೆ ಒಂದಿಷ್ಟು ಸಮಾಧಾನವಾಗಿತ್ತು. ಆದರೆ ಈಗ ಆಂಧ್ರಪ್ರದೇಶ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಈ ತರಹದ ಪ್ರಕರಣಗಳ ಆಪಾದಿತ ರಿಗೆ ಕೃತ್ಯ ನಡೆದ 21 ದಿನಗಳಲ್ಲಿ ಮರಣದಂಡನೆಗೆ ಗುರಿಪಡಿಸುವ ಮಸೂದೆ ಜಾರಿಗೆ ತರಲು ಮುಂದಾಗಿರುವುದು ಐತಿಹಾಸಿಕ ನಿರ್ಣಯವಾಗಿದೆ. ಮಹಿಳೆಯರ ಮೇಲೆ ಅಪರಾಧ ಕೃತ್ಯ ಎಸಗುವವರಿಗೆ ಆರೋಪ ಸಾಬೀತಾದ 21 ದಿನಗಳಲ್ಲಿ ಮರಣದಂಡನೆ ಶಿಕ್ಷೆ ಗುರಿಪಡಿಸುವ ಮಸೂದೆಗೆ ಆಂಧ್ರಪ್ರದೇಶ ವಿಧಾನಸಭೆ ಶುಕ್ರವಾರ ಅಂಗೀಕಾರ ನೀಡಿದ್ದು,ಈ ಕಾನೂನಿಗೆ ದಿಶಾ ಮಸೂದೆ ಎಂದು ಹೆಸರಿಸಲಾಗಿದೆ.ಪಕ್ಕದ ತೆಲಂಗಾಣ ರಾಜ್ಯದಲ್ಲಿ ಪಶುವೈದ್ಯ ಅತ್ಯಾಚಾರ ಮತ್ತು ಕೊಲೆ ನಡೆದ ಒಂದು ವಾರದ ಬಳಿಕ ಕಾನೂನು ಜಾರಿಗೆ ಮುಂದಾಗಿದೆ.

ಆಂಧ್ರಪ್ರದೇಶ ಅಪರಾಧ ಕಾನೂನು ( ತಿದ್ದುಪಡಿ) ಕಾಯ್ದೆಯೂ ಅತ್ಯಾಚಾರ ಹಾಗೂ ಆಸಿಡ್ ದಾಳಿ ಪ್ರಕರಣಗಳಲ್ಲಿ ಅಪರಾಧ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ತ್ವರಿತವಾಗಿ ವಿಚಾರಣೆ ನಡೆಸಿ, ತೀರ್ಪು ನೀಡಲಿದೆ. ಈ ಬಗ್ಗೆ ಕಳೆದ ವಾರ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದರು. 14 ದಿನಗಳಲ್ಲಿ ವಿಚಾರಣೆ ಪೂರ್ಣಗೊಂಡು, 21 ದಿನಗಳಲ್ಲಿ ತೀರ್ಪು ಹೊರಬೀಳಲಿದೆ.

ಕಳೆದವಾರ ಹೈದರಾಬಾದಿನಲ್ಲಿ ಪಶುವೈದ್ಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿ, ಕೊಂದು ಬಳಿಕ ಆಕೆಯ ದೇಹವನ್ನು ಸುಟ್ಟಿದ್ದರು. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಾಲ್ವರನ್ನು ಎನ್ಕೌಂಟರ್ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳು ನಡೆದ ಒಂದು ವಾರದ ಬಳಿಕ ಆಂಧ್ರಪ್ರದೇಶ ಸರ್ಕಾರ ಈ ಕಾನೂನು ಜಾರಿಗೆ ಮುಂದಾಗಿದೆ.

ಆಂಧ್ರಪ್ರದೇಶ ಸಚಿವಸಂಪುಟ ಮಹಿಳಾ ಮತ್ತು ಮಕ್ಕಳ ಅಪರಾಧ ತಡೆ ವಿಶೇಷ ನ್ಯಾಯಾಲಯ ಕಾಯ್ದೆಗೆ ಅನುಮೋದನೆ ನೀಡಿದೆ. ಈ ಮೂಲಕ ಮಹಿಳೆ ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ನ್ಯಾಯಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಅಷ್ಟೇ ಅಲ್ಲದೆ,ಮಹಿಳೆಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದರೂ ಅವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಅಪರಾಧ ಎಸಗುವವರಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ಎರಡನೇ ಬಾರಿ ಮಾಡುವವರಿಗೆ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಲಾಗುತ್ತದೆ.

Leave a Reply

Your email address will not be published. Required fields are marked *