ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ರಾಜ್ಯದ ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂ- 20: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ 1567 ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಯಾವ ಯಾವ ಹುದ್ದೆಗಳು:

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.

ಅಂತರ್ಜಾಲ ತಾಣ www.ksp.gov.in ಲಾಗ್ ಇನ್ ಆಗಿ ಜೂನ್ 22 ರ ನಂತರ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 20 ಕಡೇ ದಿನ:
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *