ಬೆಂಗಳೂರಿನಲ್ಲಿ ಭಯೋತ್ಪಾದಕರ ದಾಳಿ ಸಾಧ್ಯತೆ; ಹೈ ಅಲರ್ಟ್

ಕಾಶ್ಮೀರ ವಿದ್ಯಮಾನಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಭಯೋತ್ಪಾದಕರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಜನಸಂದಣಿ ಹೆಚ್ಚಾಗಿರುವ ನಗರದ ಪ್ರದೇಶಗಳಲ್ಲಿ ಜಾಗ್ರತೆ ಯಾಗಿರುವಂತೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ತಮ್ಮ ಸಿಬ್ಬಂದಿಗೆ ಅಧಿಕೃತವಾಗಿ ಆದೇಶಿಸಿದ್ದಾರೆ.

ಬೆಂಗಳೂರಿನ ವಿಧಾನ ಸೌಧ ಮಜೆಸ್ಟಿಕ್ ,ಮೆಟ್ರೋ, ರೈಲ್ವೆ ನಿಲ್ದಾಣ ,ಮಾರುಕಟ್ಟೆ ,ಹೊಟೇಲ್ ಇತ್ಯಾದಿ ಜನಸಂದಣಿ ಇರುವ ಜಾಗದಲ್ಲಿ ಭದ್ರತೆಯನ್ನು ಬಿಗಿ ಗೊಳಿಸುವಂತೆ ನಗರದ ಎಲ್ಲಾ ವಲಯಗಳ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ಭಾಸ್ಕರರಾವ್ ಸೂಚನೆ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದು ಮಾಧ್ಯಮದವರಿಗೆ ಸ್ಪಷ್ಟಪಡಿಸಿದ್ದಾರೆ. ಮಹಾನಗರಿಯಲ್ಲಿ ಇರುವ ಕಾರಣ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ. ಇಡೀ ಪೊಲೀಸ್ ವ್ಯವಸ್ಥೆ ಎಲ್ಲದಕ್ಕೂ ಸಜ್ಜಾಗಲು ಸೂಚಿಸಿದ್ದೆನೇ. ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು.ಎಲ್ಲಾ ಕಡೆ ಸಿಸಿಟಿವಿ ಸರಿಯಾಗಿ ಕೆಲಸ ನಿರ್ವಹಿಸುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಮುಖ ಸ್ಥಳಗಳಲ್ಲಿ ಇದ್ದು ಖುದ್ದಾಗಿ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಬೇಕು. ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳು ಮತ್ತು ವಾಹನಗಳನ್ನು ತಪಾಸಣೆ ಮಾಡಬೇಕು. ಖಾಸಗಿ ಸೆಕ್ಯೂರಿಟಿ ಗಾರ್ಡ್ ಗಳನ್ನು ಭದ್ರತೆಗೆ ಬಳಸಿಕೊಳ್ಳಬೇಕು. ಪೊಲೀಸರು ತಮ್ಮ ತಮ್ಮ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರಬೇಕು.ಚೆಕ್ ಪೋಸ್ಟ್ ಗಳಲ್ಲಿ ಹಾಗೂ ನಗರದ ಒಳಗೆ ಮತ್ತು ನಗರದಿಂದ ಹೊರ ಹೋಗುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ಪಟ್ಟಿಯನ್ನು ಮಾಡಿ ಪ್ರಕಟಣೆ ಹೊರಡಿಸಿದ್ದಾರೆ.

ಕಾಶ್ಮೀರ ವಿದ್ಯಮಾನಗಳ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಭಯೋತ್ಪಾದಕ ದಾಳಿಗಳು ಆಗಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಉಗ್ರರು ನುಸುಳುತ್ತಿದ್ದಾರೆ. ಉಗ್ರರಿಗೆ ಬೆಂಗಳೂರು ಸಾಫ್ಟ್ ಟಾರ್ಗೆಟ್ ಆಗಿರಬಹುದೆಂದು ಗುಪ್ತಚರರು ಎಚ್ಚರಿಕೆ ನೀಡಿದ್ದಾರೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಅತ್ತ ಜಮ್ಮು ಕಾಶ್ಮೀರದಲ್ಲಿ ಪಾಕ್ ಬೆಂಬಲಿತ ಭಯೋತ್ಪಾದಕ ಗುಂಪುಗಳಿಂದ ದಾಳಿಯಾಗುವ ಸಾಧ್ಯತೆ ಇದೆ ಎಂದು ಗುಪ್ತಚರರು ಎಚ್ಚರಿಸಿದ್ದಾರೆ . ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಆಗಿರುವಂತೆ ಅಲ್ಲಿರುವ ಭಾರತೀಯ ಸೇನೆ ಮತ್ತು ವಾಯುಸೇನೆ ಮತ್ತು ಭದ್ರತಾ ಪಡೆಗಳಿಗೆ ಸಹ ಸೂಚಿಸಲಾಗಿದೆ. ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

Leave a Reply

Your email address will not be published. Required fields are marked *