ಮತ ಚಲಾಯಿಸದೆ ಪ್ರವಾಸಕ್ಕೆ ಬಂದವರಿಗೆ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದವರು ತಕ್ಕ ಶಾಸ್ತಿ ಮಾಡಿದ್ದಾರೆ

ಹೌದು, ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದವರು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ವಾಹನಗಳನ್ನು ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಅಡ್ಡಗಟ್ಟಿ ಕೈ ಬೆರಳು ಪರೀಕ್ಷಿಸಿದಾಗ ಅನೇಕರು ಮತದಾನವನ್ನೇ ಮಾಡಿಲ್ಲ. ಅವರಲ್ಲಿ ವಿದ್ಯಾವಂತರು ಹಾಗೂ ಐಟಿ ಬಿಟಿಯ ಎಂಜಿನಿಯರ್ ಗಳೇ ಹೆಚ್ಚಿದ್ದರು .
ಹೀಗಾಗಿ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದವರು ಆಧಾರ್ ಕಾರ್ಡ್, ವೋಟರ್ ಐ ಡಿ, ಪಾನ್ ಕಾರ್ಡ್, ಕ್ರೆಡಿಟ್, ಡೆಬಿಟ್ ಕಾರ್ಡ್ ಸೇರಿ ಎಲ್ಲ ರೀತಿಯ ಕಾರ್ಡ್ ಗಳ ಜೆರಾಕ್ಸ್ ಪ್ರತಿಗಳ ಹಾರ ಹಾಕಿ, ಶಾಲು ಹೊದಿಸಿ, ವ್ಯಂಗ್ಯ ಸನ್ಮಾನ ಮಾಡುವ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದಾರೆ.

Leave a Reply

Your email address will not be published. Required fields are marked *