ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ಧಾರವಾಡದ ಮೈತ್ರಿ ಅಭ್ಯರ್ಥಿಗೆ ಸಂಕಷ್ಟ

ಧಾರವಾಡದ ಕಾಂಗ್ರೆಸ್ ಜೆಡಿಎಸ್ ಮೈತ್ರಿಯ ಲೋಕಸಭಾ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನ ಮೇಲೆ ಎಫ್ಐಆರ್ ದಾಖಲಿಸಲು ಧಾರವಾಡ ಜಿಲ್ಲಾ ಕೋರ್ಟ್ ಆದೇಶಿಸಿದ್ದು ಅದರಂತೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಡಿವೈಎಸ್ಪಿಗಳಾದ ತುಳಜಪ್ಪ ಹಾಗೂ ಚಂದ್ರಶೇಖರ್ ಅವರುಗಳನ್ನು ಅನುಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಆರೋಪಿಗಳನ್ನಾಗಿಸಿದ್ದು, ಮೂರನೆಯ ಆರೋಪಿಯಾಗಿ ವಿನಯ್ ಕುಲಕರ್ಣಿ ಅವರನ್ನು ಸೇರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಮೇಲ್ಕಾಣಿಸಿದ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಧಾರವಾಡ ಜಿಲ್ಲಾ ಕೋರ್ಟ್ ಆದೇಶಿಸಿತ್ತು.

Leave a Reply

Your email address will not be published. Required fields are marked *