ಸುಮಲತಾ ಪರ ಪ್ರಚಾರ ಮಾಡುವ ಬಗ್ಗೆ ನಿರ್ಧಾರ ತಿಳಿಸಿದ ಪವರ್ ಸ್ಟಾರ್


ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬೆನ್ನಲ್ಲೇ
ಸುಮಲತಾ ಪರ ಪ್ರಚಾರಕ್ಕೆ ನಟ ದರ್ಶನ್ ಹಾಗೂ ಯಶ್ ಜೊತೆಯಾಗಿದ್ದರೆ , ಪುನೀತ್ ರಾಜ್ ಕುಮಾರ್
ಕೂಡ ಸುಮಲತಾಗೆ ಬೆಂಬಲ ಕೊಡ್ತೀನಿ ಎಂದು ಹೇಳಿದ್ದಾರೆ, ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು ಆದರೆ, ಇಂತಹ ಎಲ್ಲ ಉಹಾಪೋಹಗಳಿಗೆ ಪವರ್ ಸ್ಟಾರ್ ತೆರೆ ಎಳೆದಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಮಂಡ್ಯ ಚುನಾವಣೆಯ ಬಗ್ಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ”ನನಗೂ, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂಬುದು ನಿಮಗೆ ತಿಳಿದಿರುವ ವಿಚಾರ” ಎನ್ನುವ ಮೂಲಕ ಅಪ್ಪು ಚುನಾವಣೆಗೆ ಬಗ್ಗೆ ತಮ್ಮ ನಿಲುವನ್ನು ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಾರ್ವಜನಿಕರಿಗೆ ಪತ್ರ ಬರೆದಿದ್ದು ನಾನು ಕಲಾವಿದ, ರಾಜಕೀಯಕ್ಕೂ ನನಗೂ ಸಂಬಂಧವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಕಲಾವಿದನಾಗಿ ಗುರುತಿಸಿಕೊಳ್ಳುತ್ತೇನೆಯೇ ಹೊರತು, ರಾಜಕಾರಣಿಯಾಗಲ್ಲ. ಮತದಾನ ಎಲ್ಲರ ಹಕ್ಕು. ಪ್ರತಿಯೊಬ್ಬ ನಾಗರಿಕನೂ ಮತದಾನ ಮಾಡಬೇಕು. ಅದನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಅಂಬರೀಶ್ ಕುಟುಂಬವು ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಕುಟುಂಬವು ನಮಗೆ ಹಿತೈಷಿಗಳು. ಇಬ್ಬರಿಗೂ ಒಳ್ಳೆದಾಗಲಿ. ಇನ್ನಷ್ಟು ಜನ ಸೇವೆ ಮಾಡುವ ಶಕ್ತಿ ಭಗವಂತ ನೀಡಲಿ.ಹೆಸರನ್ನು ಚುನಾವಣೆಗೆ ಹಾಗೂ ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಎಲ್ಲರನ್ನು ವಿನಂತಿಸಿಕೊಳ್ಳುತ್ತೇನೆ.” ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಮೂಲಕ ಪುನೀತ್ ರಾಜ್ ಕುಮಾರ್ ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಅಭ್ಯರ್ಥಿಗಳಿಗೆ ಚುನಾವಣಾ ಪ್ರಚಾರ ಮಾಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *