ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸರ್ಕಾರದಿಂದ ವೇತನ ಹೆಚ್ಹಳ!?
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿ ಇರುವಾಗ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
1 ಜನವರಿ 2019ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳದ ಆದೇಶ ಹೊರಡಿಸಲಾಗಿತ್ತು. ತುಟ್ಟಿಭತ್ಯೆಯ ಮೂಲ ವೇತನ ಶೇ 3.75 ರಿಂದ ಶೇ6.50 ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿ ಪೂರ್ಣ ನೌಕರರಿಗೆ ಮತ್ತು ಅರೆಕಾಲಿಕ ನೌಕರಿ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ವರ್ಕ್ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಅರೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ಆದೇಶ ಹೊರಡಿಸಲಾಗಿದ್ದು ಇದು ವಿವಾದಕ್ಕೀಡಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ .
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಸಹ ರಾಜ್ಯ ಸರ್ಕಾರ ತನ್ನ ನೌಕರರಿಗೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕ್ರಮ ಈಗ ಚರ್ಚೆಗೆ ಗ್ರಾಸವಾಗಿದೆ.
ವಿವರ ಹಾಗೂ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ ನೋಡಿ.